ಕಾರವಾರ: ಕರವೇ ವತಿಯಿಂದ ಅಮದಳ್ಳಿಯಲ್ಲಿ ಸಡಗರದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ..

News Desk
1 Min Read

ಕಾರವಾರ (ಅಮದಳ್ಳಿ): 71ನೇ ಕರ್ನಾಟಕ ರಾಜ್ಯೋತ್ಸವವನ್ನು ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ತಾಲೂಕು, ನಗರ ಹಾಗೂ ಗ್ರಾಮೀಣ ಘಟಕಗಳ ಸಂಯುಕ್ತಾಶ್ರಯದಲ್ಲಿ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕರವೇ ತಾಲೂಕು ಅಧ್ಯಕ್ಷರಾದ ನರೇಂದ್ರ ತಳೇಕರ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿ, ನೆರೆದಿದ್ದ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯ ಕೋರಿದರು. ಬಳಿಕ ನಾಡದೇವತೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಇದೇ ವೇಳೆ ಕನ್ನಡ ನಾಡು-ನುಡಿಯ ಸುಶ್ರಾವ್ಯ ಗೀತೆಗಳು ಮೊಳಗಿದವು ಹಾಗೂ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರ ಭಾಷಣವನ್ನು ಕಾರ್ಯಕ್ರಮದಲ್ಲಿ ಬಿತ್ತರಿಸಲಾಯಿತು.

ಈ ಸಂಭ್ರಮದ ಸಂದರ್ಭದಲ್ಲಿ ಕರವೇ ಕಾರವಾರ ನಗರ ಘಟಕದ ಅಧ್ಯಕ್ಷರಾದ ರಾಜಾ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷರಾದ ನಾಗರಾಜ ಅಮದಳ್ಳಿ, ಉಪಾಧ್ಯಕ್ಷರಾದ ಪ್ರವೀಣ ನಾಯ್ಕ ಉಪಸ್ಥಿತರಿದ್ದರು. ವೇದಿಕೆಯ ಪ್ರಮುಖರಾದ ದೀಪಕ ಗಾಂವಕರ, ನಿಲೇಶ ಆಗೇರ, ಅಕ್ಷಯ ಗೌಡ, ಸಾಗರ ಆಗೇರ, ಸಂಕೇತ ಗೌಡ, ಸುನಿಲ ಗೌಡ, ಸ್ನೇವಿಶ ಕೀಣಿಕರ ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share This Article