ಅಂಕೋಲಾದ ಬೆಳಸೆ ಪಂಚಾಯತ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾದ ಕಾರು..!!

News Desk
1 Min Read

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮ ಪಂಚಾಯತ್ ಸಮೀಪ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಅಂಕೋಲಾ ಕಡೆಯಿಂದ ಕುಮಟಾ ದಿಕ್ಕಿನತ್ತ ವೇಗವಾಗಿ ಚಲಿಸುತ್ತಿದ್ದ ಕಾರು, ಮಾರ್ಗಮಧ್ಯೆ ಕತ್ತಲೆಯಲ್ಲಿ ದಿಢೀರ್ ನಿಯಂತ್ರಣ ಕಳೆದುಕೊಂಡು ಈ ಅವಘಡಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದೆ ಎನ್ನುವು ಮಾಹಿತಿ ಇದೆ.

ರಾತ್ರಿಯ ಕಾರ್ಗತ್ತಲು, ರಸ್ತೆಯ ತಿರುವು, ಅತಿ ವೇಗ ಅಥವಾ ಚಾಲಕನಿಗೆ ಆವರಿಸಿದ ನಿದ್ರೆಯ ಮಂಪರು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯು ತನಿಖೆ ಕೈಗೊಂಡಿದೆ..

Share This Article