ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಾಗಿರುವ ಒಟ್ಟು 229 ಹುದ್ದೆಗಳ ಭರ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಈ ಹುದ್ದೆಗಳಿಗೆ ಡಿಸೆಂಬರ್ 31ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು https://karnemakaone.kar.nic.in/abcd/ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ6 ಸಲ್ಲಿಸುವ ವಿಧಾನ, ಅರ್ಹತಾ ಮಾನದಂಡಗಳು ಮತ್ತು ಅಗತ್ಯ ದಾಖಲೆಗಳ ವಿವರಗಳನ್ನು ಇದೇ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ತಾಲೂಕಾವಾರು ಖಾಲಿ ಹುದ್ದೆಗಳ ವಿವರ:

ಇವುಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ದಾಖಲೆಗಳ ಪರಿಶೀಲನೆಗಾಗಿ ಆಸಕ್ತ ಹಾಗೂ ಅರ್ಹ ಮಹಿಳೆಯರು ತಮ್ಮ ತಮ್ಮ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ಮನವಿ ಮಾಡಿದ್ದಾರೆ.
ವರದಿ: ಕಿರಣ ಗಾಂವಕರ

