ಕುಮಟಾ ಪಟ್ಟಣದ ಪ್ರಮುಖ ಕೇಂದ್ರವಾದ ಗಿಬ್ ಸರ್ಕಲ್ ಬಳಿ, ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಸರ್ಕಲ್ ಬಳಿ ಸಂಭವಿಸಿದ ಈ ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ರಸ್ತೆಯೆಲ್ಲಾ ರಕ್ತಸಿಕ್ತವಾಗಿತ್ತು.
ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ: ಈ ದುರ್ಘಟನೆಯಲ್ಲಿ ಸಮೀಪದ ಹೆಗಡೆ ಗ್ರಾಮದ ನಿವಾಸಿಯಾದ ಬೈಕ್ ಸವಾರ ಸುಬ್ರಮಣ್ಯ ಭೀರಪ್ಪ ಅಂಬಿಗ ಎಂಬುವವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗೆ ಬೈಕ್ನ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಅದೇ ಗ್ರಾಮದ ಭಗೀರಥ ಮಹಾದೇವ ಅಂಬಿಗ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ತಿಳಿದು ಬಂದಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ದೊಡ್ಡಾಯಿಸಿದರು. ಬಳಿಕ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಕಾಸ ವಾಹಿನಿ ವರದಿ

