ಅಂಕೋಲಾ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ರವಿರಾಜ ದೀಕ್ಷಿತ್ ನೇಮಕ..

News Desk
1 Min Read

ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವದ ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ನೂತನ ತಹಶೀಲ್ದಾರ್ (ಗ್ರೇಡ್-1) ಆಗಿ ಶ್ರೀ ರವಿರಾಜ ದೀಕ್ಷಿತ್ ಅವರನ್ನು ನೇಮಕ ಮಾಡಿದೆ.

ನವೆಂಬರ್ 09, 2026 ರಂದು ಕಂದಾಯ ಇಲಾಖೆಯು ಈ ಕುರಿತ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೊದಲು ಬೈಂದೂರು ತಾಲ್ಲೂಕಿನಲ್ಲಿ ತಹಶೀಲ್ದಾರ್ (ಗ್ರೇಡ್-1) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ರವಿರಾಜ ದೀಕ್ಷಿತ್ ಅವರನ್ನು, ಅಂಕೋಲಾ ತಾಲ್ಲೂಕಿನಲ್ಲಿ ಖಾಲಿ ಇದ್ದ ತಹಶೀಲ್ದಾರ್ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.

ಈ ಆದೇಶದ ಅನ್ವಯ, ಸ್ಥಳ ನಿಯುಕ್ತಿಗೊಂಡ ಅಧಿಕಾರಿಗಳು ಕೂಡಲೇ ತಮ್ಮ ನೂತನ ಹುದ್ದೆಯ ಕಾರ್ಯಭಾರವನ್ನು ವಹಿಸಿಕೊಳ್ಳಬೇಕಿದೆ. ಕರ್ತವ್ಯಕ್ಕೆ ಹಾಜರಾದ ಬಳಿಕ, ತಮ್ಮ ಸಿಟಿಸಿ ವರದಿಯನ್ನು ಕಂದಾಯ ಇಲಾಖೆಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

Share This Article