Connect with us

ರಾಜಕೀಯ

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

Nemo enim ipsam voluptatem quia voluptas sit aspernatur aut odit aut fugit, sed quia consequuntur magni dolores eos qui.

Published

on

ಬಿಜೆಪಿ ಶಿಸ್ತು ಸಮಿತಿಯ ನೋಟಿಸ್‌ಗೆ ಉತ್ತರ ಕೊಡುವುದಕ್ಕೆ ಏನೂ ಇಲ್ಲ ಎಂದು ಹೇಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, 9 ಪುಟಗಳ ಉತ್ತರ ನೀಡಿರುವುದು ಈಗ ತಿಳಿದುಬಂದಿದೆ. 72 ಗಂಟೆಗಳ ಒಳಗೆ ಉತ್ತರಿಸುವಂತೆ ನೀಡಲಾಗಿದ್ದ ಸೂಚನೆಗೆ ಅವರು ಮರುದಿನವೇ ಉತ್ತರಿಸಿದ್ದಾರೆ. ಈ ಹಿಂದೆ ನೀಡಿದ್ದ ಉತ್ತರವನ್ನೇ ಅವರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ನವದೆಹಲಿ, ಫೆಬ್ರವರಿ 18: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಣ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಪಕ್ಷಕ್ಕೆ ಮುಜುಗರ ತರುವಂಥ ಹೇಳಿಕೆಗಳನ್ನು ನೀಡುತ್ತಿರುವುದಕ್ಕಾಗಿ ಯತ್ನಾಳ್​​ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. 72 ಗಂಟೆ ಒಳಗೆ ಉತ್ತರಿಸುವಂತೆ ಖಡ್ ಸೂಚನೆ ನೀಡಿತ್ತು. ಈ ನೋಟಿಸ್​​ಗೆ ಯತ್ನಾಳ್ ಉತ್ತರವನ್ನೇ ನೀಡಿಲ್ಲ, ಅವರ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುತ್ತದೆಯೇ ಎಂಬುದು ಈವರೆಗಿನ ಪ್ರಶ್ನೆಯಾಗಿತ್ತು. ಆದರೆ, ನೋಟಿಸ್ ಪಡೆದ ಮರುದಿನವೇ ಶಿಸ್ತು ಸಮಿತಿಗೆ ಯತ್ನಾಳ್ ಉತ್ತರ ನೀಡಿದ್ದರು ಎಂಬ ವಿಚಾರ ಈಗ ತಿಳಿದುಬಂದಿದೆ.

ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಯತ್ನಾಳ್​ 9 ಪುಟಗಳ ಉತ್ತರ ನೀಡಿದ್ದಾರೆ. ಇ-ಮೇಲ್ ಮೂಲಕ ಉತ್ತರ ನೀಡಿದ್ದಾರೆ. ಇದರೊಂದಿಗೆ, ನೋಟಿಸ್ ದೊರೆತ 72 ಗಂಟೆಗಳ ಒಳಗಾಗಿಯೇ ಅವರು ಉತ್ತರ ನೀಡಿದಂತಾಗಿದೆ.

ಶಿಸ್ತು ಸಮಿತಿಯ ನೋಟಿಸ್​ಗೆ ಉತ್ತರ ನೀಡುವುದಕ್ಕೆ ಏನೂ ಇಲ್ಲ ಎಂದು ಯತ್ನಾಳ್ ಕೆಲವು ದಿನಗಳ ಹಿಂದೆ ಹೇಳಿದ್ದರು.

ಯತ್ನಾಳ್ ನೀಡಿದ ಉತ್ತರವೇನು?

ಬಿಜೆಪಿ ಕೇಂದ್ರ ಶಿಸ್ತು ಸಮಿತಿಗೆ ಯತ್ನಾಳ್ ನೀಡಿರುವ ಉತ್ತರವೇನು ಎಂಬುದರ ವಿವರ ಸದ್ಯ ಬಹಿರಂಗವಾಗಿಲ್ಲ. ಆದಾಗ್ಯೂ, ವಿಜಯೇಂದ್ರ ವಿರುದ್ಧ ದೂರುಗಳ ಸರಮಾಲೆಯನ್ನೇ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಬಣ ರಾಜಕೀಯ ಮಾಡಿಲ್ಲ. ಪಕ್ಷದ ಶಿಸ್ತನ್ನು ನಾನು ಉಲ್ಲಂಘಿಸಿಲ್ಲ’ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ಪಕ್ಷದ ಚೌಕಟ್ಟಿನಲ್ಲಿ ವಕ್ಫ್​ ವಿರುದ್ಧ ಹೋರಾಟ ಮಾಡಿದ್ದೇವೆ. ತಂಡವಾಗಿ ಹೋರಾಟ ಮಾಡಿ ನಾವು ಯಶಸ್ವಿಯಾಗಿದ್ದೇವೆ. ವಕ್ಫ್ ಕುರಿತ​ ಹೋರಾಟವನ್ನು ಉನ್ನತ ನಾಯಕರು ಸಮರ್ಥಿಸಿದ್ದಾರೆ. ಬಿ.ವೈ.ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾರ್ಯಕರ್ತರು, ನಾಯಕರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಯತ್ನಾಳ್ ಉತ್ತರಿಸಿದ್ದಾರೆ.

ಮೌನಕ್ಕೆ ಶರಣಾದ ಯತ್ನಾಳ್ ಬಣದ ನಾಯಕರು

ಶಿಸ್ತು ಸಮಿತಿ ನೋಟಿಸ್ ಬಳಿಕ ಯತ್ನಾಳ್‌ ಬಣ ಮೌನಕ್ಕೆ ಶರಣಾಗಿತ್ತು. ಕಳೆದ ಕೆಲವು ದಿನಗಳಿಂದ ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಯತ್ನಾಳ್ ಬಣದ ನಾಯಕ ರಮೇಶ್ ಜಾರಕಿಹೊಳಿ ಕೂಡ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡುವ ತಂತ್ರವನ್ನು ಬಣ ಅನುಸರಿಸುತ್ತಿದೆ ಎನ್ನಲಾಗಿದೆ.

ದೆಹಲಿ ಭೇಟಿಯಿಂದ ವಾಪಸಾದ ಬಳಿಕ ಬೆಂಗಳೂರಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಸದ್ಯ ಗೋಕಾಕ್ ಕ್ಷೇತ್ರದಲ್ಲಿ ಸುತ್ತಾಟ ಮುಂದುವರಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಯತ್ನಾಳ್​ಗೆ ನೋಟಿಸ್: ಇದೇ ಮೊದಲಲ್ಲ

ಅಂದಹಾಗೆ, ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಈ ಹಿಂದೆ ಕೂಡ ನೋಟಿಸ್ ನೀಡಿತ್ತು. ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಯತ್ನಾಳ್​ ಸಿಡಿದೆದ್ದಿದ್ದು, ಬಹಿರಂಗವಾಗಿಯೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಕಳೆದ ಡಿಸೆಂಬರ್​ನಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು.

ನೋಟಿಸ್​​ಗೆ ಖುದ್ದು ಶಿಸ್ತು ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡಿದ್ದ ಯತ್ನಾಳ್, ಆ ನಂತರದಲ್ಲಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದರು. ಅಲ್ಲದೆ, ಯತ್ನಾಳ್ ಬಣದ ಇತರ ನಾಯಕರೂ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದರು. ಬಣ ಜಗಳ ತೀವ್ರಗೊಂಡ ಬೆನ್ನಲ್ಲೇ ಶಿಸ್ತು ಸಮಿತಿ ಮತ್ತೆ ಶೋಕಾಸ್ ನೀಡಿತ್ತು.

Click to comment

Leave a Reply

Your email address will not be published. Required fields are marked *

ರಾಜಕೀಯ

ಕೆಂಪೇಗೌಡ ಲೇಔಟ್​ಗೆ ಮೂಲಭೂತ ಸೌಕರ್ಯ ವಿಳಂಬ: ಬಿಡಿಎ ಅಧಿಕಾರಿಗಳ ವರ್ತನೆಗೆ ಅರ್ಜಿ ಸಮಿತಿ ಸದಸ್ಯರು ಸಭಾತ್ಯಾಗ

Quis autem vel eum iure reprehenderit qui in ea voluptate velit esse quam nihil molestiae consequatur, vel illum qui dolorem.

Published

on

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯರು ಇಂದು ಸಭೆಯಿಂದ ಸಭಾತ್ಯಾಗ ಮಾಡಿರುವಂತಹ ಘಟನೆ ನಡೆದಿದೆ. ಬಿಡಿಎ ನಿರಂತರ ವಿಳಂಬ ಮತ್ತು ಭರವಸೆಗಳ ಉಲ್ಲಂಘನೆಯಿಂದಾಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಬಿಡಿಎ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂಲಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಗಿದೆ.

ಬೆಂಗಳೂರು, ಫೆಬ್ರವರಿ 20: ನಾಡಪ್ರಭು ಕೆಂಪೇಗೌಡ ಬಡಾವಣೆಯ (Kempe Gowda Layout) ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳು (ರಸ್ತೆ, ಸೇತುವೆ, ಕುಡಿಯುವ ನೀರು, ವಿದ್ಯುತ್, ಒಳಚರಂಡಿ ಮುಂತಾದವು)ಗಳನ್ನು ಕಲ್ಪಿಸುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇತ್ತೀಚೆಗೆ ಭರವಸೆ ನೀಡಿತ್ತು. ಆದರೆ ಆ ಭರವಸೆ ಹುಸಿಯಾಗಿದೆ. ಗಡುವು ಮುಗಿದರೂ ಬಡಾವಣೆ ನಿವಾಸಿಗಳ ಬವಣೆ ಮಾತ್ರ ನೀಗಿಲ್ಲ. ವಿಧಾನಸಭೆಯ ಅರ್ಜಿ ಸಮಿತಿ ಸದ್ಯಸರು ಇಂದು ಈ ವಿಚಾರವಾಗಿ ಸಭೆ ಮಾಡಿದ್ದು, ಈ ವೇಳೆ ಬಿಡಿಎ ಅಧಿಕಾರಿಗಳ ವರ್ತನೆ ಖಂಡಿಸಿ ಸಭಾತ್ಯಾಗ ಮಾಡಿರುವಂತಹ ಘಟನೆ ನಡೆದಿದೆ.

ಇನ್ನು ಅರ್ಜಿ ಸಮಿತಿಯ ಸಭೆಯಿಂದ ಸಭಾತ್ಯಾಗ ಮಾಡಿರುವ ಕುರಿತಾಗಿ ಬಿಜೆಪಿ ಶಾಸಕ ಎಸ್​. ಸುರೇಶ್ ಕುಮಾರ್​, ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾಗರಿಕರಿಗೆ ಮೂಲಭೂತ ಸೌಲಭ್ಯ, ಸೌಕರ್ಯ (ರಸ್ತೆ, ಸೇತುವೆ, ಕುಡಿಯುವ ನೀರು, ವಿದ್ಯುತ್, ಒಳಚರಂಡಿ ಮುಂತಾದವು) ಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳು ವಿಫಲವಾದರೆ ನಾಗರಿಕರು ನಮ್ಮ ಈ ಅರ್ಜಿ ಸಮಿತಿಗೆ ತಮ್ಮ ಅಹವಾಲನ್ನು ಸಲ್ಲಿಸಬಹುದು. ಅರ್ಜಿ ಸಮಿತಿಯು ಈ ನಾಗರಿಕರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಶಿಫಾರಸ್ಸು ಮಾಡುತ್ತದೆ ಎಂದರು.

ಇದನ್ನೂ ಓದಿ: ಕೆಂಪೇಗೌಡ ಲೇಔಟ್​ನಲ್ಲಿ ಮೂಲಸೌಕರ್ಯ ಸಂಕಷ್ಟ; ಸ್ವಂತವಾಗಿ ವಿದ್ಯುತ್ ಸಂಪರ್ಕ ಪಡೆದ ನಿವಾಸಿಗಳು; ವೆಚ್ಚ ಭರಿಸುವಂತೆ ಬಿಡಿಎಗೆ ಮನವಿ

ಇಂದು ವಿಧಾನಸಭೆಯ ಅರ್ಜಿ ಸಮಿತಿಯ ಸಭೆ ಮಾಡಲಾಗಿದ್ದು, ಇಂದಿನ ಸಭೆಯ ಕಾರ್ಯಸೂಚಿಯಲ್ಲಿ ಮೊದಲನೇ ವಿಷಯ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಾಗಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು 3 ವರ್ಷಗಳಲ್ಲಿ ಒಟ್ಟಾರೆ 11 ಸಭೆಗಳು ನಡೆದಿವೆ ಎಂದಿದ್ದಾರೆ.

ಈ ಬಡಾವಣೆಯಲ್ಲಿ ನಿವೇಶನ ಹಂಚಿಕೆಯಾಗಿ 8-9 ವರ್ಷಗಳಾಗಿವೆ. ಇಷ್ಟು ವರ್ಷಗಳ ನಂತರವೂ ಸಹ ಈ ನಿವೇಶನದಾರರು ಮೂಲಭೂತ ಸೌಕರ್ಯ ಕೊರತೆಯಿಂದ ಮನೆ ನಿರ್ಮಿಸುವಂತಹ ಸ್ಥಿತಿಯಲ್ಲಿ ಇಲ್ಲ. ಇದುವರೆವಿಗೂ ಸುಮಾರು 05 ಜನ ಬಿಡಿಎ ಆಯುಕ್ತರು ಅರ್ಜಿ ಸಮಿತಿಯ ಮುಂದೆ ಬಂದು ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ವಿವಿಧ ಭರವಸೆಗಳನ್ನು ನೀಡಿದ್ದಾರೆ. ದಿನಾಂಕ 2022 ಮೇ 05 ರ ಅರ್ಜಿ ಸಮಿತಿಯಲ್ಲಿ ಕೆಂಪೇಗೌಡ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಡಿಸೆಂಬರ್-2023 ವರೆಗೆ ಅವಕಾಶ ನೀಡಲಾಗಿತ್ತು. ನಂತರ, 2023 ಸೆಪ್ಟೆಂಬರ್ 07 ರಂದು ಈ ಯೋಜನೆಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ 1 ವರ್ಷದ ಸಮಯವನ್ನು ಪ್ರಾಧಿಕಾರವೇ ಕೋರಿತ್ತು. ಆಗ ನಮ್ಮ ಸಮಿತಿಯು ಇನ್ನಷ್ಟು ಉದಾರತೆ ತೋರಿಸಿ 12 ತಿಂಗಳ ಬದಲಿಗೆ 14 ತಿಂಗಳು ಅವಧಿಗೆ ವಿಸ್ತರಿಸಿತ್ತು. ಈ ವಿಸ್ತರಿಸಿದ ಅವಧಿಯು ನವೆಂಬರ್ 2024 ಕ್ಕೆ ಕೊನೆಗೊಂಡಿತು. ಆದರೆ ಇಂದಿನ ಸಭೆಯಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಆಖೈರಾಗಿ ಯಾವಾಗ, ಎಂದು ಒದಗಿಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟವಾದ ಉತ್ತರ ಸಿಗಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಂತ ಹಣದಲ್ಲಿ ವಿದ್ಯುತ್ ಸಂಪರ್ಕ

ಅರ್ಜಿ ಸಮಿತಿಯು ಶಾಸಕಾಂಗದ ಒಂದು ಭಾಗ, ಸರ್ಕಾರಿ ಇಲಾಖೆಗಳು ಮತ್ತು ಬಿಡಿಎ ಅಂತಹ ಸಂಸ್ಥೆಗಳು ಈ ಸಮಿತಿಗೆ ಉತ್ತರ ಕೊಡುವಾಗ ಸಾಕಷ್ಟು ಎಚ್ಚರಿಕೆಯಿಂದ ಕೊಡಬೇಕು. ಮನೆ ಕಟ್ಟುವವರಿಗೆ ನಿವೇಶನ ಹಂಚಿಕೆಯಾದ ಎರಡು ವರ್ಷಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದಾಗಿ ನಿವೇಶನ ಹಂಚಿಕೆ ಮಾಡುವ ಸಮಯದಲ್ಲಿ ಬಿಡಿಎ ಭರವಸೆ ನೀಡಿದೆ. ಆದರೆ ಇಂದಿಗೂ ಸಹ ಮನೆ ಕಟ್ಟಲು ಗಟ್ಟಿ ಮನಸ್ಸು ಮಾಡುವ ನಿವೇಶನದಾರರು ಸ್ವಂತ ಹಣದ ಮೂಲಕ ಹಳ್ಳಿಗಳಿಂದ ವಿದ್ಯುತ್ ಸಂಪರ್ಕ ಪಡೆದುಕೊಳ್ಳುತ್ತಿದ್ದಾರೆ. ಈ ತಾತ್ಕಾಲಿಕ ಸಂಪರ್ಕಕ್ಕಾಗಿ, ಬೆಸ್ಕಾಂ ನಿವಾಸಿಗಳಿಂದ ವಾಣಿಜ್ಯ ರೀತಿಯಲ್ಲಿ ಶುಲ್ಕವನ್ನು ಸಂಗ್ರಹಿಸುತ್ತಿದೆ. ಈ ನತದೃಷ್ಟ ನಿವಾಸಿಗಳು ತಮ್ಮ ಬಿಲ್ ಗಳನ್ನು ಮಾತ್ರವಲ್ಲದೆ, ತಮ್ಮ ರಸ್ತೆಗಳಲ್ಲಿನ ಬೀದಿ ದೀಪಗಳ ಬಿಲ್ ಗಳನ್ನು ಸಹ ಪಾವತಿಸುತ್ತಿದ್ದಾರೆ. ಕಾರಣ, ಬಿಡಿಎ ವಿದ್ಯುತ್ ಜಾಲವನ್ನು ಪೂರ್ಣಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಹಂಚಿಕೆದಾರರು ಮನೆಗಳನ್ನು ನಿರ್ಮಿಸುತ್ತಿಲ್ಲ ಎಂದು ಬಿಡಿಎ ದೂರುತ್ತಿದೆ. ಆದರೆ ಕುಡಿಯುವ ನೀರಿನ ಪೂರೈಕೆ ಎಲ್ಲಿದೆ? ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಗತ ವಿದ್ಯುತ್, ನೀರು ಮತ್ತು ಒಳಚರಂಡಿ ಮಾರ್ಗಗಳೊಂದಿಗೆ ಅತ್ಯಾಧುನಿಕ ಬಡಾವಣೆ ಆಗಲಿದೆ ಎಂದು 7-8 ವರ್ಷಗಳ ಹಿಂದೆ ಬಿಡಿಎ ಪ್ರಕಟಿಸಿದ್ದರಿಂದ, ನಿವೇಶನ ಮಾಲೀಕರು ಅಂದು ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ಪಾವತಿಸಿ ನಿವೇಶನವನ್ನು ಪಡೆದಿದ್ದಾರೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯ ನಿವೇಶನಗಳಲ್ಲಿ ಮನೆಗಳನ್ನು ನಿರ್ಮಾಣ ಮಾಡದವರಿಗೆ ನಿವೇಶನದ ಈಗಿನ ಮಾರುಕಟ್ಟೆ ದರದ 10% ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಜೊತೆಗೆ ಮನೆ ನಿರ್ಮಿಸಲು ಈ ಹಿಂದೆ ನೀಡಿದ್ದ 5 ವರ್ಷಗಳ ಅವಧಿಯನ್ನು ಈಗ 3 ವರ್ಷಗಳಿಗೆ ಇಳಿಸಲಾಗಿದೆ. ಇದು ಯಾವ ಆಧಾರದ ಮೇಲೆ ಎಂದು ಪ್ರಶ್ನಿಸಿದ್ದಾರೆ.

ಬಿಡಿಎ ಅಧಿಕಾರಿಗಳ ವರ್ತನೆಗೆ ಗರಂ ಆದ ಸುರೇಶ್ ಕುಮಾರ್​

ಈ ಎಲ್ಲಾ ಪ್ರಶ್ನೆಗಳನ್ನು ನಾನು 20 ದಿನಗಳ ಹಿಂದೆ ಅರ್ಜಿ ಸಮಿತಿಯಲ್ಲಿ ಉಪಸ್ಥಿತರಿದ್ದ ಬಿಡಿಎ ಕಾರ್ಯದರ್ಶಿಗಳಿಗೆ ನೀಡಿದ್ದೆ. ಆದರೆ, ಇಂದು ನಡೆದ ಸಭೆಯಲ್ಲಿ ತನ್ನ ವೈಫಲ್ಯ ಮರೆಮಾಚಲು 20ಅಡಿX 30 ಅಡಿ ನಿವೇಶನ ಕೊಂಡವರು ಮಾಡುತ್ತಿರುವ ಅಪಪ್ರಚಾರವನ್ನು ನಂಬಿ ಸಮಿತಿಯ ಸದಸ್ಯರು ಇಲ್ಲಿ ವಿಷಯ ಪ್ರಸ್ತಾವನೆ ಮಾಡುತ್ತಿದ್ದಾರೆ ಎಂದು ಮಾತನಾಡಿದ ಬಿಡಿಎ ಅಧಿಕಾರಿಗಳ ವರ್ತನೆ ವಿರುದ್ದ ನಾನು ಸಹಜವಾಗಿ ಆಕ್ರೋಶಕ್ಕೆ ಒಳಗಾದೆ ಎಂದಿದ್ದಾರೆ.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲ ಸೌಕರ್ಯ ಕಾಮಗಾರಿಗಳಿಗೆ ವೇಗ ನೀಡಲು ಬಿಡಿಎ ಆಯುಕ್ತರ ಆದೇಶ

ಬಿಡಿಎ ಅಧಿಕಾರಿಗಳು ಸಮಿತಿಯ ಮುಂದೆ ತಾವೇ ನೀಡಿರುವ ಅಂತಿಮ ಗಡುವು ಮುಗಿದಿದ್ದರೂ, ಕೆಲಸ ಆಗದೇ ಇರುವುದನ್ನು ಪ್ರಶ್ನಿಸಿದಾಗ ನಿವೇಶನದಾರರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿ, ನನ್ನಂತಹ ಶಾಸಕರ ಕಾರ್ಯವೈಖರಿಯ ಬಗ್ಗೆ ಬೊಟ್ಟು ತೋರಿಸಿ ಮಾತನಾಡಿದಾಗ ನನಗೆ ಸಹಿಸಲಾಗಲಿಲ್ಲ. ಆಗ, ನಮ್ಮ ಸಮಿತಿಯ ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ರವರ ಸಮ್ಮುಖದಲ್ಲಿ ಈ ರೀತಿ ಶಾಸಕರು ನ್ಯಾಯಯುತವಾಗಿ ಮಾಡುತ್ತಿರುವ ಪ್ರಸ್ತಾವನೆಯನ್ನು ಪ್ರಶ್ನಿಸಿ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಪ್ರಾಧಿಕಾರ ಮಾಡುತ್ತಿರುವ ಅಪಪ್ರಚಾರವನ್ನು ಪ್ರತಿಭಟಿಸಿ ಸಭಾತ್ಯಾಗ ಮಾಡಿದೆ ಎಂದು ತಿಳಿಸಿದ್ದಾರೆ.

ನನ್ನ ಪ್ರಸ್ತಾವನೆಯ ಏಕೈಕ ಉದ್ದೇಶವೆಂದರೆ ದುಬಾರಿ ಹಣ ಪಾವತಿಸಿ ನಿವೇಶನ ಪಡೆದಿರುವ, ತಮ್ಮ ಜೀವನದ ಉಳಿತಾಯದ ಹಣವನ್ನು ನಿವೇಶನ ಕೊಳ್ಳುವುದಕ್ಕೆ ಹಣ ಪಾವತಿ ಮಾಡಿರುವ ಈ ನತದೃಷ್ಟ ನಿವೇಶನ ಮಾಲೀಕರುಗಳು, ತಮ್ಮ ನಿವೇಶನದಲ್ಲಿ ಮನೆ ನಿರ್ಮಿಸಲು ಅವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಮಾತ್ರ. ಇದನ್ನು ಬಿಟ್ಟು ಬೇರೆ ಯಾವುದೇ ದುರುದ್ದೇಶವಿರುವುದಿಲ್ಲ ಎಂದು ಹೇಳಿದ್ದಾರೆ.

Continue Reading

ರಾಜಕೀಯ

ಯಾರೋ ಹೇಳಿದ ಮೇಲೆ ಬಿಜೆಪಿ ಪಕ್ಷವನ್ನು ಒಪ್ಪದ ಜನರ ಗುಂಪು ಮೊದಲ ಬಾರಿಗೆ ಸೇರಿಕೊಂಡಿತು. ವಿಜಯೇಂದ್ರ ನೋಟಿಸ್ ಕಳುಹಿಸಿದ್ದಾರೆ ಎಂದು ಯತ್ನಾಳ್ ಕೆಂಡಾಮಂಡಲರಾದರು.

At vero eos et accusamus et iusto odio dignissimos ducimus qui blanditiis praesentium voluptatum deleniti.

Published

on

ಬಿಜೆಪಿ ಎಂಬ ಗುಂಪಿನ ಮುಖಂಡರು ಸ್ವಲ್ಪ ದಿನ ಹೆಚ್ಚೇನೂ ಮಾತನಾಡದಿದ್ದರೂ ಈಗ ಮತ್ತೆ ಮಾತನಾಡುತ್ತಿದ್ದಾರೆ. ಅವರಿಗೆ ನೋಟಿಸ್ ಬಂದಿದ್ದರಿಂದ ಕೊಂಚ ಮುಜುಗರಕ್ಕೆ ಒಳಗಾಗಿ ವಿಶೇಷ ಸಭೆ ನಡೆಸಿದರು. ಹಾಗಾದರೆ, ಎಲ್ಲರನ್ನು ಒಪ್ಪದ ನಾಯಕರು ಗುರುವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಏನು ಮಾತನಾಡಿದರು? ಎಲ್ಲಾ ವಿವರಗಳು ಇಲ್ಲಿವೆ.

ವಕ್ಫ್ ಹೋರಾಟದಲ್ಲಿ ತಮ್ಮ ಪ್ರಯತ್ನ ಯಶಸ್ವಿಯಾಗಿದೆ ಎಂದು ಗುಂಪಿನ ಹಿರಿಯ ಸದಸ್ಯರು ಹೇಳಿದರು ಮತ್ತು ಒಟ್ಟಿಗೆ ಕಾಫಿ ಕುಡಿದು ಸಂಭ್ರಮಿಸಿದರು. ತಮ್ಮ ಮುಂದಿನ ಯೋಜನೆಗಳ ಬಗ್ಗೆಯೂ ಮಾತನಾಡಿದ್ದಾರೆ. ಈಗ, ಈ ಗುಂಪಿನಲ್ಲಿ ಹೆಚ್ಚಿನ ರಹಸ್ಯಗಳು ಮತ್ತು ಚರ್ಚೆಗಳು ನಡೆಯುತ್ತಿರುವಂತೆ ತೋರುತ್ತಿದೆ. ಯತ್ನಾಳ್ ವಿಜಯೇಂದ್ರ ವಿರುದ್ಧ ಹೋರಾಟ ಮುಂದುವರಿಸುತ್ತಾರಾ ಅಥವಾ ನೋಟಿಸ್ ಗೆ ಪ್ರತಿಕ್ರಿಯಿಸಿದ ಬಳಿಕ ಬಿಡುವು ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಜನರದ್ದು.

ಒಂದು ಹಂತದಲ್ಲಿ, ಯತ್ನಾಳ್ ಅವರು ನೋಟಿಸ್ ಕೇಳಿದ ನಂತರ ನಿಜವಾಗಿಯೂ ಅಸಮಾಧಾನಗೊಂಡರು ಮತ್ತು ಹೊರಡಲು ಸಿದ್ಧರಾದರು. ಮತ್ತೊಬ್ಬ ಸದಸ್ಯ ಪ್ರತಾಪ್ ಸಿಂಹ ಸಮಾಧಾನಪಡಿಸಲು ಯತ್ನಿಸಿದರಾದರೂ ಯತ್ನಾಳ್ ಸಿಟ್ಟಿಗೆದ್ದು ಒಳ ಹೋದರು. ಬೆಂಗಳೂರಿನಲ್ಲಿ ಫೆಬ್ರವರಿ 21 ರಂದು ಬಿಜೆಪಿ ಎಂಬ ರಾಜಕೀಯ ಪಕ್ಷದ ಬಸನಗೌಡ ಪಾಟೀಲ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಜನರ ಗುಂಪು ಸಭೆ ನಡೆಸಿತು.

ರಾಜ್ಯದಲ್ಲಿ ತಮ್ಮ ಗುಂಪಿನ ನಾಯಕನನ್ನು ಬದಲಾಯಿಸುವುದು ಮತ್ತು ವಕ್ಫ್ ಹೋರಾಟ ಎಂಬುದಕ್ಕೆ ಸಂಬಂಧಿಸಿದ ಸಮಸ್ಯೆಯಂತಹ ಕೆಲವು ಪ್ರಮುಖ ವಿಷಯಗಳ ಬಗ್ಗೆ ಅವರು ಮಾತನಾಡಿದರು. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಮನೆಯಲ್ಲಿ ಭೇಟಿಯಾಗಿದ್ದರು. ಈ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿದಂತೆ ಕೆಲ ರಾಜಕಾರಣಿಗಳು ಉಪಸ್ಥಿತರಿದ್ದರು. ವಿಶೇಷ ಸಮಿತಿಯಿಂದ ನೋಟಿಸ್ ಕಳುಹಿಸಿದ ನಂತರ, ಯತ್ನಾಳ್ ವಿಜಯೇಂದ್ರ ಎಂಬ ಇನ್ನೊಬ್ಬ ವ್ಯಕ್ತಿಯ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು.

ಯತ್ನಾಳ್ ಅಸಮಾಧಾನಗೊಂಡಿದ್ದು, ವಿಜಯೇಂದ್ರ ಅವರಿಗೆ ನೋಟಿಸ್ ಬಂದಿರುವ ಬಗ್ಗೆ ಮೊದಲೇ ಗೊತ್ತಿದೆ ಎಂದು ಭಾವಿಸಿದ್ದಲ್ಲದೆ, ಈ ಬಗ್ಗೆ ಕೋಪಗೊಂಡಿದ್ದರು.

Continue Reading

ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಸಂಕಷ್ಟ: ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ರಾಜ್ಯಪಾಲರಿಗೆ ಬಿಜೆಪಿ ದೂರು

Neque porro quisquam est, qui dolorem ipsum quia dolor sit amet, consectetur, adipisci velit, sed quia non numquam.

Published

on

ಮುಡಾ ಹಗರಣ ಸಂಬಂಧ ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್​​ಚಿಟ್ ನೀಡಲಾಗಿದೆ. ಆದರೆ, ಅಧಿಕಾರಿಗಳು ತಪ್ಪೆಗಿರುವುದು ದೃಢಪಟ್ಟಿದೆ ಲೋಕಾಯುಕ್ತ ತನಿಖಾ ವರದಿ ಹೇಳಿದೆ. ಸದ್ಯ ರಿಲೀಫ್ ಮೂಡ್​​ನಲ್ಲಿರುವ ಸಿದ್ದರಾಮಯ್ಯಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಏನದು? ವಿವರಗಳಿಗೆ ಮುಂದೆ ಓದಿ.

ಬೆಂಗಳೂರು, ಫೆಬ್ರವರಿ 20: ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪದಿಂದ ಸಿಎಂ ಸಿದ್ದರಾಮಯ್ಯ (CM Siddaramaiah) ಬಚಾವಾಗಿದ್ದಾರೆ. ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ನೀಡಿದ್ದಾರೆ. ಆದರೆ, ಮುಡಾಕ್ಕೆ ಸಂಬಂಧಿಸಿದ ಮತ್ತೊಂದು ಹಗರಣದಲ್ಲಿ ಈಗ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಎನ್​ಆರ್ ರಮೇಶ್ (NR Ramesh) ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

ಏನಿದು ಹೊಸ ಮುಡಾ ಪ್ರಕರಣ?

ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣ ಮಾಡುವುದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರಿನ ಹಿಣಕಲ್ ಗ್ರಾಮದ ಸರ್ವೆ ನಂಬರ್ 70/4 ಎ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಭೂಮಿಯನ್ನು ಡಿ ನೋಟಿಫಿಕೇಶನ್ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಉಲ್ಲಂಘಿಸಿದ್ದಾರೆ. ಅಲ್ಲದೆ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಭ್ರಷ್ಟಾಚಾರವಾಗಿದೆ ಎಂದು ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ರಮೇಶ್ ಉಲ್ಲೇಖಿಸಿದ್ದಾರೆ.

ಎನ್​ಆರ್ ರಮೇಶ್ ರಾಜ್ಯಪಾಲರಿಗೆ ಬರೆದ ಪತ್ರದ ಪ್ರತಿ

Nr Rsmesh Letter Copy

1985ರಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದ ಮುಡಾ ಮೂಲ ಮಾಲೀಕರಿಗೆ ಹಣ ನೀಡಿತ್ತು.

ಪ್ಲಾಟ್ ನಂ 3161 ಸೇರಿದಂತೆ ಕಾನೂನಿನ ಪ್ರಕಾರ ಸ್ವಾಧೀನಪಡಿಸಿಕೊಂಡ ಭೂಮಿಯಿಂದ ವಿವಿಧ ಅರ್ಜಿದಾರರಿಗೆ ಮುಡಾ ನಿಗದಿಪಡಿಸಿದ ಪ್ಲಾಟ್‌ಗಳನ್ನು ಸುಂದರ್ ರಾಜ್ ಎಂಬವರಿಗೆ ನೀಡಲಾಗಿತ್ತು. ಅವರು ಅನುಮೋದನೆಗಳನ್ನು ಪಡೆದ ನಂತರ ಮನೆ ನಿರ್ಮಿಸಿದ್ದರು. ಆದಾಗ್ಯೂ, ಕಾನೂನು ಅವಶ್ಯಕತೆಗಳನ್ನು ಅನುಸರಿಸಿದರೂ, ಅವರ ಮನೆಯನ್ನು ಕಾನೂನುಬಾಹಿರವಾಗಿ ನೆಲಸಮ ಮಾಡಲಾಯಿತು. ಇದು ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸರಿಯಾದ ಪ್ರಕ್ರಿಯೆಯ ಬಗ್ಗೆ ಗಂಭೀರ ಕಳವಳ ಮೂಡಿಸಿತ್ತು ಎಂದು ಎನ್​ಆರ್ ರಮೇಶ್ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಧಿಸೂಚನೆಯ ವಿರುದ್ಧದ ಸ್ಪಷ್ಟ ತೀರ್ಪಿನ ಹೊರತಾಗಿಯೂ, ಡಿಇ -23/10/1997 ರಂದು, ಅಂದಿನ ಮುಡಾ ಅಧ್ಯಕ್ಷ ಸಿ. ಬಸವೇಗೌಡ ಅವರು ರಾಜ್ಯ ಸರ್ಕಾರದ ಅನುಮೋದನೆಯಿಲ್ಲದೆ, ಎಲ್ಲಾ ಶಾಸನಬದ್ಧ ಮಾನದಂಡಗಳನ್ನು ಉಲ್ಲಂಘಿಸಿ ಸರ್ವೇ ನಂಬರ್ 70/4 ಎ ಗಾಗಿ ಅಕ್ರಮ ಡಿ-ನೋಟಿಫಿಕೇಶನ್ ಆದೇಶವನ್ನು ನೀಡಿದ್ದರು ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಿದ್ದರಾಮಯ್ಯ ವಿರುದ್ಧದ ಆರೋಪವೇನು?

ಈ ಡಿನೋಟಿಫಿಕೇಶನ್ ಆದ ಕೇವಲ 27 ದಿನಗಳ ನಂತರ, 26/11/1997 ರಂದು, ಆ ಸಮಯದಲ್ಲಿ ಉಪ ಮುಖ್ಯಮಂತ್ರಿ, ಹಣಕಾಸು ಸಚಿವ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿದ್ದರಾಮಯ್ಯ ಅವರು ಪ್ಲಾಟ್ ಸಂಖ್ಯೆ 3161 (80×120 ಅಡಿ, 9,600 ಚದರ ಅಡಿ) ಅನ್ನು ಸಂಕಮ್ಮ ಎಂಬವರಿಂದ 6.72 ಲಕ್ಷ ರೂ.ಗೆ ಖರೀದಿಸಿದ್ದರು. ಮುಡಾ ಕಾನೂನುಬದ್ಧವಾಗಿ ಸ್ವಾಧೀನಪಡಿಸಿಕೊಂಡ 12 ವರ್ಷಗಳ ನಂತರ ಈ ವ್ಯವಹಾರ ನಡೆದಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ವಾಷಿಂಗ್ ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ: ಲೋಕಾಯುಕ್ತ ಕ್ಲೀನ್​ಚಿಟ್​ಗೆ ಅಶೋಕ್ ವ್ಯಂಗ್ಯ

ಸದ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರಷ್ಟೆ. ಅವರ ವಿರುದ್ಧ ತನಿಖೆಗೆ ಇನ್ನೂ ಅನುಮತಿ ದೊರೆತಿಲ್ಲ. ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿರಲಿವೆ.

Continue Reading
Advertisement

Trending