ಅಂಕೋಲಾದ ಸರಳೆಬೈಲ್ ಬಳಿ ಮುಂಜಾನೆಯೇ ಭೀಕರ ಅಪಘಾತ: ಟ್ಯಾಂಕರ್‌- ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ..!!

News Desk
1 Min Read

ಅಂಕೋಲಾ: ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ಯಾಂಕರ್ ನಡುವೆ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಂಕೋಲಾ ತಾಲೂಕಿನ ಸರಳೆಬೈಲ್ ಸಮೀಪ ನಡೆದ ಈ ಘಟನೆಯಲ್ಲಿ, ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಇಂದು ಬೆಳಿಗ್ಗೆ ಸುಮಾರು 7.45ರ ಸುಮಾರಿಗೆ ಅಂಕೋಲಾ ಮಾರ್ಗವಾಗಿ ಸಾಗುತ್ತಿದ್ದ ಸಾರಿಗೆ ಬಸ್, ಅಗಸೂರು ದಾಟಿ ಸರಳೆಬೈಲ್ ಬಳಿ ತಲುಪಿದ ವೇಳೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.ಈ ದುರ್ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆದರೆ, ಎಷ್ಟು ಮಂದಿ ಗಾಯಗೊಂಡಿದ್ದಾರೆ ಹಾಗೂ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ದೃಢಪಡಬೇಕಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಂಕೋಲಾ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

Share This Article