ವಿಕಾಸ ವಾಹಿನಿ ವರದಿ ಬೆನ್ನಲ್ಲೇ – ಬೀದಿ ನಾಯಿಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಪಶು ವೈದ್ಯಕೀಯ ಇಲಾಖೆಗೆ ಪತ್ರ..

News Desk
1 Min Read

ಅಂಕೋಲಾ, 22 ಆಗಸ್ಟ್ 2025: ಅಂಕೋಲಾ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಹಗಲಿನ ಹೊತ್ತಿನಲ್ಲಿ ವಿದ್ಯಾರ್ಥಿಗಳ ಮೇಲೆ ದಾಳಿ ಸಂಭವಿಸಬಹುದೆಂದು ಕೆಲ ಶಿಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ, ಪುರಸಭೆ ವ್ಯಾಪ್ತಿಯಲ್ಲಿ ನಡೆದ ನಾಯಿಗಳ ದಾಳಿ ವಿಷಯವನ್ನು ವಿಕಾಸ ವಾಹಿನಿ 21 ಆಗಸ್ಟ್ 2025 ರಂದು ವರದಿ ಮಾಡಿತ್ತು.

ತಾಲೂಕು ಆರೋಗ್ಯ ಅಧಿಕಾರಿಗಳು ಈ ವರದಿಯ ಹಿನ್ನೆಲೆ ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದು, ಪಟ್ಟಣದಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ.

ಪತ್ರದಲ್ಲಿ, ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತುರ್ತು ಕ್ರಮವಾಗಿ ಶಿಬಿರಗಳನ್ನು ಹಮ್ಮಿಕೊಳ್ಳುವುದು ಅಗತ್ಯ ಎಂದು ತಿಳಿಸಲಾಗಿದೆ.ಅದೇ ವೇಳೆ, ಶಿಬಿರಗಳ ಸ್ಥಳ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಪಶು ವೈದ್ಯಕೀಯ ಇಲಾಖೆಗಳು ಚರ್ಚಿಸಿ ಕ್ರಮಗಳನ್ನು ರೂಪಿಸಬೇಕೆಂದು ಸೂಚಿಸಲಾಗಿದೆ.

ಸ್ಥಳೀಯರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಗಮನಿಸಿ, ಶಿಬಿರಗಳ ಮಾಹಿತಿ ದೊರೆತರೆ ಹೆಚ್ಚಿನ ಸಹಕಾರ ನೀಡಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.

Share This Article