ಅಂಕೋಲಾದಲ್ಲಿ ಬೆಚ್ಚಿಬೀಳಿಸುವ ಘಟನೆ: ಕಾಂಗ್ರೆಸ್ ಮುಖಂಡ “ಗೋಪಾಲಕೃಷ್ಣ ನಾಯಕ” ಮೇಲೆ ಕೊಲೆ ಯತ್ನ..

News Desk
1 Min Read

ಅಂಕೋಲಾ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಅಂಕೋಲಾದ ಪ್ರಭಾವಿ ಕಾಂಗ್ರೆಸ್ ನಾಯಕರಾದ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಸ್ಪತ್ರೆಯತ್ತ ದೌಡಾಯಿಸಿದರು. ದುಷ್ಕರ್ಮಿಗಳ ಈ ಅಮಾನವೀಯ ಕೃತ್ಯದಿಂದಾಗಿ ಗೋಪಾಲಕೃಷ್ಣ ನಾಯಕ್ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯ ತಕ್ಷಣವೇ ಅವರನ್ನು ಸ್ಥಳೀಯರ ನೆರವಿನಿಂದ ಅಂಕೋಲಾದ ಆರ್ಯ ಮೆಡಿಕಲ್ ಸೆಂಟರ್‌ಗೆ ದಾಖಲಿಸಿ, ತುರ್ತು ಪ್ರಾಥಮಿಕ ಚಿಕಿತ್ಸೆ ಒದಗಿಸಲಾಗಿದೆ. ತಲೆಗೆ ಪೆಟ್ಟಾಗಿರುವುದರಿಂದ ಹೆಚ್ಚಿನ ವೈದ್ಯಕೀಯ ತಪಾಸಣೆ ಹಾಗೂ ಸ್ಕ್ಯಾನಿಂಗ್‌ಗಾಗಿ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಲ್ಲೆಕೋರರು ಗೋವಾ ನೋಂದಣಿಯ ಕಾರಿನಲ್ಲಿ ಬಂದು ಈ ಭೀಕರ ಕೃತ್ಯವನ್ನು ಎಸಗಿದ್ದಾರೆ. ಎಂದು ಹೇಳಲಾಗುತ್ತಿದೆ ಹಲ್ಲೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

ಆಸ್ಪತ್ರೆಗೆ ಹರಿದುಬಂದ ಜನಸಾಗರ: ತಮ್ಮ ನಾಯಕನ ಮೇಲೆ ಹಲ್ಲೆಯಾದ ಸುದ್ದಿ ಹರಡುತ್ತಿದ್ದಂತೆ, ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಸ್ಪತ್ರೆಯ ಬಳಿ ಬ್ರಹತ್ ಪ್ರಮಾಣದಲ್ಲಿ ಜಮಾಯಿಸಿದ್ದರು. ನೆರೆದಿದ್ದ ಜನರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಚುರುಕುಗೊಂಡ ಪೊಲೀಸ್ ತನಿಖೆ: ಈ ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್ ಎಂ. ಎನ್ ಹಾಗೂ ಸಿಪಿಐ ಚಂದ್ರಶೇಖರ್ ಮಠಪತಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಅಲ್ಲದೇ, ಗಾಯಾಳು ಗೋಪಾಲಕೃಷ್ಣ ನಾಯಕ್ ಅವರಿಂದಲೇ ಘಟನೆಯ ಕುರಿತು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಅವರ ಹೇಳಿಕೆಯ ಆದರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Share This Article
Leave a Comment