ಕಾರವಾರ: ಸಂಸದೀಯ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿ ಹಂತದಲ್ಲಿ ಅರಿವು ಮೂಡಿಸಲು ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ತಿಳಿಸಿಕೊಡಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ತಾಲ್ಲೂಕಿನ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರುಗಳಾದ ಸ್ವಪ್ನಾ ಶೇಟ್, ಮಾನಸ ಕುಂಕೂರ, ವಿಜಯಲಕ್ಶ್ಮೀ ಮಿಶಿಯವರ ಹಾಗೂ ಮಧುಮತಿ ಆಲದಕಟ್ಟಿ ಇವರುಗಳು ತಂಡ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಸಂಸದೀಯ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಉತ್ತಮ ವಾಕ್ ಚಾತುರ್ಯದಿಂದ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಇವರ ಸಾಧನೆಯನ್ನು ಶಾಲಾ ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.
ವಿಕಾಸ ವಾಹಿನಿ ವರದಿ