ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ರವರು ವಯೋಸಹಜತೆಯಿಂದ ಇಂದು ಸಂಜೆ ದೈವಾದೀನರಾಗಿದ್ದರೆ.
ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ರವರಿಗೆ 86 ವರ್ಷ ವಯಸ್ಸಾಗಿದ್ದು ಮಗ ಸುಬ್ರಾಯ ಮತ್ತು ಮಗಳು ಸೋಮಿ ಇಬ್ಬರು ಮಕ್ಕಳು ಹಾಗೂ ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.
ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ತುಳಸಿ ಗೌಡ ರವರು ನೆಟ್ಟು ಬೆಳಸುತಿದ್ದರು. ಈವರೆಗೆ ಲಕ್ಷಾಂತರ ಗಿಡಗಳನ್ನು ಬೆಳಸಿ ಪಾಲನೆ ಮಾಡಿದ ಕೀರ್ತಿ ಇವರದ್ದು . ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದ್ದರು.
ತುಳಸಿ ಗೌಡ, ಪರಿಸರ ಕಾಳಜಿ ಹಿನ್ನಲೆ 2020 ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಹ ಲಭಿಸಿತ್ತು. ತುಳಸಿ ಗೌಡ ನಿಧನಕ್ಕೆ ಶಾಸಕ ಸತೀಶ್ ಸೈಲ್, ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಶಾಸಕಿ ರೂಪಾಲಿ ನಾಯ್ಕ್.ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ..