ಕಾರವಾರ: ಕಾರವಾರದ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಹೆದ್ದಾರಿ ಸುರಂಗ ಮಾರ್ಗದ (ಟನೆಲ್ ) ಬಳಿ ಸ್ವಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ತಾತ್ಕಾಲಿಕವಾಗಿ ಒಂದು ಬದಿಯಲ್ಲಿ ಸುರಂಗ ಮಾರ್ಗದ ಸಂಚಾರ ಸ್ಥಗಿತ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ಭೂಕುಸಿತ ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವವರು ಎಚ್ಚರಿಕೆಯಿಂದಿರುವುದು ಅಗತ್ಯವಾಗಿದೆ.